ಹಸ್ತ ತೋಳು ಉರ ಕಂಠ ಕರ್ಣ ಮಸ್ತಕದಲ್ಲಿ ರುದ್ರಾಕ್ಷಿಯ ಧರಿಸಿಪ್ಪ ಸದ್ಭಕ್ತನೆ ರುದ್ರನು ನೋಡಾ. ಅದೆಂತೆಂದಡೆ; ಹಸ್ತೇ ಚೋರಸಿ ಕಂಠೇ ವಾ ಮಸ್ತಕೇ ವಾಪಿ ಧಾರಯೇತ್ ಮುಚ್ಯತೇ ಸರ್ವಪಾಪೇಭ್ಯಃ ಸ ರುದ್ರೋ ನಾತ್ರ ಸಂಶಯಃ ಇಂತೆಂದುದಾಗಿ ಸಮಸ್ತ ಪಾಪಂಗಳ ಕಳೆದು ಕೂಡಲಸಂಗಯ್ಯ ತನ್ನಂತೆ ಮಾಡುವನು