ಹಾಡಿ ಮಾಡುವರೆಲ್ಲ ಹಾದರಗಿತ್ತಿಯ ಮಕ್ಕಳಯ್ಯಾ
ಕೂಡಿ ಮಾಡುವರೆಲ್ಲ ಕುಂಟಣಿಗಿತ್ತಿಯ ಮಕ್ಕಳಯ್ಯಾ
ಬೇಡಿ ಮಾಡುವರೆಲ್ಲ ಬೇಡಿತಿಯ ಮಕ್ಕಳಯ್ಯಾ
ಡಂಬಕತನದಲ್ಲಿ ಮಾಡುವರೆಲ್ಲ ಡೊಂಬಗಿತ್ತಿಯ ಮಕ್ಕಳಯ್ಯಾ
ಅಚ್ಚ ಪ್ರಸಾದಿಗಳೆಂಬವರೆಲ್ಲ ಮುಚ್ಚಗಿತ್ತಿ[ಮಾದಗಿತ್ತಿ ?]ಯ ಮಕ್ಕಳಯ್ಯಾ
ಸಮಯಾಚಾರದಲ್ಲಿಪ್ಪವರೆಲ್ಲ ಸಮ್ಮಗಾರಿಯ ಮಕ್ಕಳಯ್ಯಾ
ಜಂಗಮ ಬಂದ ಬರವ
ನಿಂದ ನಿಲುಕಡೆಯ ನೋಡಿ
ಮಾಡಿ ನೀಡಿ ಸ್ವಯಾನುಭಾವದ ಸಮ್ಯಗ್ಜ್ಞಾನವನರಿವವರು ಕೂಡಲಚೆನ್ನಸಂಗನ ಶರಣರಯ್ಯಾ.