ಹಾರುವರೆಲ್ಲರೂ ನೆರೆದು ಶೂದ್ರನ ಹಾರುವನ ಮಾಡುವಲ್ಲಿ ನಂದಿಮುಖವಿಲ್ಲದೆ ಮತ್ತೇನನೂ ಮಾಡಲಾಗದು. ವಿಭೂತಿ[ಯಿ]ಲ್ಲದೆ ಮತ್ತೇನನೂ ಮಾಡಲಾಗದು. `ಭರ್ಗೋ ದೇವಃ ಎಂಬ ಮಂತ್ರ[ವಿ]ಲ್ಲದೆ ಮತ್ತೇನನೂ ಮಾಡಲಾಗದು. ನಿಮ್ಮಿಂದ ಕುಲಜರಾಗಿ ಮತ್ತೆ ಅನ್ಯದೈವಕ್ಕೆರಗುವ ಜಗದನ್ಯಾಯಿಗಳನೇನೆಂಬೆ ಕೂಡಲಸಂಗಮದೇವಾ !