ಹಾವಿನ ಹೆಡೆಗಳ ಕೊಂಡು ಕೆನ್ನೆಯ ತುರಿಸುವಂತೆ ಉರಿಯ ಕೊಳ್ಳಿಯ ಕೊಂಡು ಮಂಡೆಯ ಸಿಕ್ಕ ಬಿಡಿಸುವಂತೆ ಹುಲಿಯ ಮೀಸೆಯ ಹಿಡಿದುಕೊಂಡು ಒಲಿದುಯ್ಯಲನಾಡುವಂತೆ ಕೂಡಲಸಂಗನ ಶರಣರೊಡನೆ ಮರೆದು ಸರಸವಾಡಿದಡೆ ಸುಣ್ಣಕಲ್ಲ ಮಡಿಲಲ್ಲಿ ಕಟ್ಟಿಕೊಂಡು ಮಡುವ ಬಿದ್ದಂತೆ.