ಹುತ್ತವ ಕಂಡಲ್ಲಿ ಹಾವಾಗಿ ನೀರ ಕಂಡಲ್ಲಿ [ಒಳ್ಳೆ]ಯಾದವನ ಮಚ್ಚುವನೆ ಬಾರದ ಭವಂಗಳಲ್ಲಿ ಬರಿಸುವನಲ್ಲದೆ ಮಚ್ಚುವನೆ ಅಘೋರನರಕವನುಣಿಸುವನಲ್ಲದೆ ಮಚ್ಚುವನೆ ಅಟಮಟದ ಭಕ್ತರ ಕಂಡಡೆ ಕೋಟಲೆಗೊಳಿಸುವ ಕೂಡಲಸಂಗಮದೇವ.