ಹೂವಿನ ಮೇಲೊಂದು ಚಿಕ್ಕ ಬೆಟ್ಟ ಹುಟ್ಟಿ ಬೆಕ್ಕಿನ ಮೇಲಾರು ಬೆಟ್ಟ ಹುಟ್ಟಿದವು. ಬೆಟ್ಟದ ಮೇಲಣವರು ಕಲ್ಲನಿರಿಸಿ ಆರೂ ಕಾಣರು ! ಒಂದು ಗಿರಿ ನೂರನಾಲ್ವತ್ತೆಂಟು ಲಕ್ಷ ಮುಖವು. ನಾನೊಂದು ಮುಖದಲಿ ಇದ್ದೇನೆ ಕಾಣಾ ಗುಹೇಶ್ವರಾ.