ಹೆಣ್ಣು ಹೆಣ್ಣಾದಡೆ ಗಂಡಿನಸೂತಕ.



Pages   (key to Page Status)   


ಹೆಣ್ಣು ಹೆಣ್ಣಾದಡೆ ಗಂಡಿನಸೂತಕ. ಗಂಡು ಗಂಡಾದಡೆ ಹೆಣ್ಣಿನಸೂತಕ. ಮನದಸೂತಕ ಹಿಂಗಿದಡೆ ತನುವಿನ ಸೂತಕಕ್ಕೆ ತೆರಹುಂಟೆ ? ಅಯ್ಯಾ
ಮೊದಲಿಲ್ಲದ ಸೂತಕಕ್ಕೆ ಮರುಳಾಯಿತ್ತು ಜಗವೆಲ್ಲ. ಎನ್ನ ದೇವ ಚೆನ್ನಮಲ್ಲಿಕಾರ್ಜುನನೆಂಬ ಗರುವಂಗೆ ಜಗವೆಲ್ಲ ಹೆಣ್ಣು ನೋಡಾ ಅಯ್ಯಾ.