ಹೊನ್ನಿನ ಆಪ್ಯಾಯನಕ್ಕೆ ಬೋಳಾದವನಲ್ಲ ಮಣ್ಣಿನ ಆಪ್ಯಾಯನಕ್ಕೆ ಬೋಳಾದವನಲ್ಲ ಹೆಣ್ಣಿನ ಆಪ್ಯಾಯನಕ್ಕೆ ಬೋಳಾದವನಲ್ಲ. ಕೂಡಲಸಂಗಮದೇವರಲ್ಲಿ ಎನಗಾರು ಇಲ್ಲವೆಂದು ಬೋಳಾದನೆನ್ನ ಪ್ರಭುದೇವರು.