ಹೊನ್ನು ಹೆಣ್ಣು ಮಣ್ಣೆಂಬ ಕರ್ಮದ ಬಲೆಯಲ್ಲಿ ಸಿಲುಕಿ ವೃಥಾಯ ಬರುದೊರೆ ಹೋಹ ಕೆಡುಕ ಹಾರುವ ನಾನಲ್ಲ. ಹಾರುವೆನಯ್ಯಾ ಭಕ್ತರ ಬರವ ಗುಡಿಗಟ್ಟಿ ಹಾರುವೆನಯ್ಯಾ ಶರಣರ ಬರವ ಗುಡಿಗಟ್ಟಿ ಕೂಡಲಸಂಗಮದೇವನು ವಿಪ್ರಕರ್ಮವ ಬಿಡಿಸಿ ಅಶುದ್ಧನ ಶುದ್ಧನ ಮಾಡಿದನಾಗಿ.