ಹೊನ್ನೆನ್ನದು ಹೆಣ್ಣೆನ್ನದು ಮಣ್ಣೆನ್ನದು ಮನೆಯೆನ್ನದು ಮಕ್ಕಳೆನ್ನವರೆಂದು ಭಿನ್ನಭಾವದಲ್ಲಿರ್ದು ಸನ್ನಿಹಿತಜಂಗಮದೊಡನೆ ಸಹಭೋಜನವ ಮಾಡಿದಡೆ ಕುನ್ನಿ ಕುಕ್ಕುಟನ ಬಸುರಲ್ಲಿ ಬಪ್ಪುದು ತಪ್ಪದು ನೋಡಾ ಅಖಂಡೇಶ್ವರಾ.