ಹೊನ್ನ ನೇಗಿಲಲುತ್ತು ಎಕ್ಕೆಯ


Pages   (key to Page Status)   

ಹೊನ್ನ ನೇಗಿಲಲುತ್ತು ಎಕ್ಕೆಯ ಬೀಜವ ಬಿತ್ತುವರೆ ಕರ್ಪುರದ ಮರನ ತರಿದು ಕಳ್ಳಿಗೆ ಬೇಲಿಯನಿಕ್ಕುವರೆ ಶ್ರೀಗಂಧದ ಮರನ ತರಿದು ಬೇವಿಂಗೆ ಅಡೆಯನಿಕ್ಕುವರೆ ನಮ್ಮ ಕೂಡಲಸಂಗನ ಶರಣರಿಗಲ್ಲದೆ ಬೇರೆ ಇಚ್ಛಾಭೋಜನವನಿಕ್ಕಿದಡೆ ಕಿಚ್ಚಿನೊಳಗೆ ಉಚ್ಚೆಯ ಹೊಯಿದು ಹವಿಯ ಬೇಳ್ದಂತಾಯಿತ್ತು.