ಹೊಯಿದವರೆನ್ನ ಹೊರೆದವರೆಂಬೆ ಬಯಿದವರೆನ್ನ ಬಂಧುಗಳೆಂಬೆ ನಿಂದಿಸಿದವರೆನ್ನ ತಂದೆತಾಯಿಗಳೆಂಬೆ ಆಳಿಗೊಂಡವರೆನ್ನ ಆಳ್ದವರೆಂಬೆ ಜರಿದವರೆನ್ನ ಜನ್ಮಬಂಧುಗಳೆಂಬೆ ಹೊಗಳಿದವರೆನ್ನ ಹೊನ್ನಶೂಲದಲಿಕ್ಕಿದರೆಂಬೆ ಕೂಡಲಸಂಗಮದೇವಾ.