ಹೊರಗನೆ ಕೊಯ್ದು ಹೊರಗನೆ ಪೂಜಿಸಿ ಹೊರಗಾಗಿ ಹೋಯಿತ್ತು ತ್ರೈಜಗವೆಲ್ಲ. ಆನದನರಿಯದಂತೆ ಲಿಂಗವ ಪೂಜಿಸ ಹೋದಡೆ ಕೈ ಲಿಂಗದಲ್ಲಿ ಸಿಲುಕಿತ್ತಲ್ಲಾ ! ಮನ ದೃಢದಿಂದ ನಿಮ್ಮ ನೆನೆದಿಹೆನೆಂದಡೆ ತನು ಸಂದಣಿಸಿತ್ತು ಗುಹೇಶ್ವರಾ.