ಹೊರಗಾಡಿ ಬಂದೆನೆಂದು ನುಡಿಸಲೊಲ್ಲದೆ ಸುಮ್ಮನಿದ್ದೆನು ಎನ್ನ ಮನ ನೊಂದು ತಾಗಿದಡೆ ನಿಮ್ಮತ್ತ ಮುಂದಾದೆನು. ಬಿಕ್ಕುತ್ತ ಬೆದರುತ್ತ ಕಾಲಮೇಲೆ ಬಿದ್ದಡೆ ಕಂಗಳ ಉದಕ ಮಜ್ಜನಕ್ಕೆರೆದಂತಾಯಿತ್ತು ! ಅಂತಿರ್ದಡೆ ಕಂಡು ನೆಗಹಿದನು ನಮ್ಮ ಗುಹೇಶ್ವರಲಿಂಗವು.