ಹೊರಗೆ ಹೊನ್ನ ಬಿಟ್ಟೆನೆಂದು ನುಡಿವುತಿರ್ಪೆನಲ್ಲದೆ ಒಳಗೆ ಬಿಟ್ಟು ನಿಶ್ಚಿಂತನಲ್ಲವಯ್ಯ ನಾನು. ಹೊರಗೆ ಹೆಣ್ಣ ಬಿಟ್ಟೆನೆಂದು ನುಡಿವುತಿರ್ಪೆನಲ್ಲದೆ
ಒಳಗೆ ಬಿಟ್ಟು ನಿಶ್ಚಿಂತನಲ್ಲವಯ್ಯ ನಾನು. ಹೊರಗೆ ಮಣ್ಣ ಬಿಟ್ಟೆನೆಂದು ನುಡಿವುತಿರ್ಪೆನಲ್ಲದೆ
ಒಳಗೆ ಬಿಟ್ಟು ನಿಶ್ಚಿಂತನಲ್ಲವಯ್ಯ ನಾನು. ಇಂತಪ್ಪ ಏಕಾಂತದ್ರೋಹಿ ಗುಪ್ತಪಾತಕಂಗೆ- ಅಖಂಡೇಶ್ವರನು ಒಲಿ ಎಂದೊಡೆ ಎಂತೊಲಿವನಯ್ಯ ಎನಗೆ ?