ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ ಜಲ-ಬಿಂದುವಿನ ವ್ಯವಹಾರ ಒಂದೇ
ಆಶೆಯಾಮಿಷರೋಷಹರುಷ ವಿಷಯಾದಿಗಳೆಲ್ಲಾ ಒಂದೇ. ಏನನೋದಿ
ಏನ ಕೇಳಿ
ಏನು ಫಲ ಕುಲಜನೆಂಬುದಕ್ಕೆ ಆವುದು ದೃಷ್ಟ ಸಪ್ತಧಾತುಸಮಂ ಪಿಂಡಂ ಸಮಯೋನಿಸಮದ್ಭವಂ ಆತ್ಮಜೀವಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಂ ಎಂದುದಾಗಿ
ಕಾಸಿ ಕಮ್ಮಾರನಾದ
ಬೀಸಿ ಮಡಿವಾಳನಾದ
ಹಾಸನಿಕ್ಕಿ ಸಾಲಿಗನಾದ
ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದರುಂಟೆ ಜಗದೊಳಗೆ ಇದು ಕಾರಣ ಕೂಡಲಸಂಗಮದೇವಾ
ಲಿಂಗಸ್ಥಲವನರಿದವನೆ ಕುಲಜನು.