ಹೊಲೆಯ ಹೊಲಬಿಗನಾದಡೆ ಅವನ ಹೊರೆಯಲಿಪ್ಪುದು ಲೇಸು ಕಂಡಯ್ಯಾ. ಹೊಲಬುಗೆಡದೆ ಲಿಂಗ ಶರಣೆನ್ನಿರಯ್ಯಾ. ಹೊಲಬುಗೆಡಬೇಡ ಶಿವ ಶರಣೆನ್ನಿರಯ್ಯಾ. ನಮ್ಮ ಕೂಡಲಸಂಗನ ಮಹಾಮನೆಯಲು ಮಾದಾರ ಚೆನ್ನಯ್ಯ ಹೊಲಬಿಗನಯ್ಯಾ. 135